Call : +91 96119 76709     website.siri@gmail.com

SR High Tech Vision Presents

Siri Soundarya

Mane Manada Kannada Monthly Magazine

Siri Soundarya > Breaking News > ದ್ವಿಚಕ್ರ ವಾಹನಗಳಲ್ಲಿ ಕೇವಲ ಒಬ್ಬರು ಮಾತ್ರ ಸಂಚರಿಸಬೇಕು:ರಾಜ್ಯ ಸರ್ಕಾರ

ದ್ವಿಚಕ್ರ ವಾಹನಗಳಲ್ಲಿ ಕೇವಲ ಒಬ್ಬರು ಮಾತ್ರ ಸಂಚರಿಸಬೇಕು:ರಾಜ್ಯ ಸರ್ಕಾರ

ಬೆಂಗಳೂರು: 100 ಸಿಸಿ ಮತ್ತು ಅದಕ್ಕಿಂತಲೂ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನಗಳಲ್ಲಿ ಕೇವಲ ಒಬ್ಬರು ಮಾತ್ರ ಸಂಚರಿಸಬೇಕು. ಹಿಂಬದಿ ಸವಾರರನ್ನು ಕೂರಿಸಿಕೊಂಡು ಹೋಗಲು ಅವಕಾಶ ನೀಡದಂತೆ ನಿಯಮ ರೂಪಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ಈ ಹೊಸ ನಿಯಮವು ಈಗಾಗಲೇ ರಸ್ತೆಯಲ್ಲಿ ಓಡಾಡುತ್ತಿರುವ ದ್ವಿಚಕ್ರ ವಾಹನಗಳಿಗೆ ಅನ್ವಯಿಸುವುದಿಲ್ಲ. ಆದರೆ ಹೊಸದಾಗಿ ಮಾರಾಟವಾಗುವ 100 ಸಿಸಿ ಮತ್ತು ಅದಕ್ಕಿಂತಲೂ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನಗಳಿಗೆ ಹೊಸ ನಿಯಮ ಅನ್ವಯಿಸುತ್ತದೆ. ಬೈಕ್​ ತಯಾರಕರು ಕೇವಲ ಓರ್ವ ವ್ಯಕ್ತಿ ಮಾತ್ರ ಕುಳಿತುಕೊಳ್ಳುವಂತೆ ಸೀಟಿನ ವ್ಯವಸ್ಥೆ ಮಾಡಬೇಕಿದೆ. ಗ್ರಾಹಕ ಬೈಕ್​ ಕೊಂಡ ನಂತರ ಅದರಲ್ಲಿ ಬದಲಾವಣೆ ಮಾಡುವಂತಿಲ್ಲ.

ಹಿಂಬದಿ ಸವಾರರ ಹಿತದೃಷ್ಟಿಯಿಂದ ಈ ಹೊಸ ನಿಮಯವನ್ನು ಜಾರಿಗೆ ತರಲು ಸಾರಿಗೆ ಇಲಾಖೆ ನಿರ್ಧರಿಸಿದೆ. ರಾಜ್ಯ ಸರ್ಕಾರ ಸಹ ಈ ಸಂಬಂಧ ಹೈಕೋರ್ಟ್​ಗೆ ಅಫಿಡವಿಟ್​ ಸಲ್ಲಿಸಿದ್ದು, ಇನ್ನೊಂದು ವಾರದಲ್ಲಿ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಅಪಘಾತ ಪ್ರಕರಣವೊಂದರ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್​ ರಾಜ್ಯ ಸರ್ಕಾರದಿಂದ ವಿವರಣೆ ಕೇಳಿತ್ತು. ಈ ಪ್ರಕರಣದ ಸಂಬಂಧ ರಾಜ್ಯ ಸರ್ಕಾರ ಕೋರ್ಟ್​ಗೆ ವಿವರಣೆ ನೀಡಿದ್ದು, 100 ಸಿಸಿ ಮತ್ತು ಅದಕ್ಕಿಂತಲೂ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರನ್ನು ನಿಷೇಧಿಸಲು ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರುವುದಾಗಿ ತಿಳಿಸಿದೆ ಎಂದು ಸಾರಿಗೆ ಸಚಿವ ಎಚ್​ಎಂ ರೇವಣ್ಣ ತಿಳಿಸಿದ್ದಾರೆ.

Leave a Reply