Call : +91 96119 76709     website.siri@gmail.com

SR High Tech Vision Presents

Siri Soundarya

Mane Manada Kannada Monthly Magazine

Siri Soundarya > Breaking News > ಟೆಸ್ಟ್ ಬೌಲರ್‌ ರ‍್ಯಾಂಕಿಂಗ್: ಅಶ್ವಿನ್‌ ಹಿಂದಿಕ್ಕಿದ ರಬಾಡ

ಟೆಸ್ಟ್ ಬೌಲರ್‌ ರ‍್ಯಾಂಕಿಂಗ್: ಅಶ್ವಿನ್‌ ಹಿಂದಿಕ್ಕಿದ ರಬಾಡ

ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಕಗಿಸೊ ರಬಾಡ ಟೆಸ್ಟ್ ಬೌಲರ್‌ಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಬುಧವಾರ ಮೂರನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಭೂತಪೂರ್ವ ಬೌಲಿಂಗ್ ಸಾಮರ್ಥ್ಯ ತೋರಿರುವ ರಬಾಡ ರ‍್ಯಾಂಕಿಂಗ್‌ನಲ್ಲಿ ಭಾರತದ ರವಿಚಂದ್ರನ್ ಅಶ್ವಿನ್ ಅವರನ್ನು ಹಿಂದಿಕ್ಕಿದ್ದಾರೆ.

ಬಾಂಗ್ಲಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ರಬಾಡ ಎರಡೂ ಇನಿಂಗ್ಸ್‌ಗಳಲ್ಲಿ ಐದು ವಿಕೆಟ್ ಕಬಳಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಇವರ ಬೌಲಿಂಗ್ ಸಾಮರ್ಥ್ಯದಿಂದಾಗಿ ದಕ್ಷಿಣ ಆಫ್ರಿಕಾ ತಂಡ ಇನಿಂಗ್ಸ್ ಹಾಗೂ 254 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತ್ತು.

ರ‍್ಯಾಂಕಿಂಗ್‌ನಲ್ಲಿ ರಬಾಡ ಎರಡು ಸ್ಥಾನಗಳಲ್ಲಿ ಏರಿಕೆ ಕಂಡಿದ್ದರಿಂದ ಶ್ರೀಲಂಕಾದ ಸ್ಪಿನ್ನರ್ ರಂಗನಾ ಹೆರಾತ್ ಅವರನ್ನೂ ಹಿಂದಿಕ್ಕಿದ್ದಾರೆ. ಒಟ್ಟು 876 ಪಾಯಿಂಟ್ಸ್‌ಗಳು ಅವರ ಬಳಿ ಇವೆ. ಎರಡನೇ ಸ್ಥಾನದಲ್ಲಿರುವ ಭಾರತದ ಸ್ಪಿನ್ನರ್ ರವೀಂದ್ರ ಜಡೇಜ ಅವರಿಗಿಂತ ಕೇವಲ ಎಂಟು ಪಾಯಿಂಟ್ಸ್‌ಗಳಿಂದ ಹಿಂದೆ ಉಳಿದಿದ್ದಾರೆ. ಅಗ್ರಸ್ಥಾನದಲ್ಲಿರುವ ಇಂಗ್ಲೆಂಡ್‌ ಬೌಲರ್ ಜೇಮ್ಸ್ ಆಂಡರ್ಸನ್ ಅವರಿಂದ 20 ಪಾಯಿಂಟ್ಸ್‌ಗಳ ಅಂತರ ಹೊಂದಿದ್ದಾರೆ.

ದಕ್ಷಿಣ ಆಫ್ರಿಕಾದ ಇನ್ನೊಬ್ಬ ಬೌಲರ್‌ ಡುಯನ್ ಒಲಿವರ್‌ ಒಂಬತ್ತು ಸ್ಥಾನಗಳಲ್ಲಿ ಏರಿಕೆ ಕಂಡಿದ್ದಾರೆ. ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಅವರು 48ನೇ ಸ್ಥಾನ ಗಳಿಸಿದ್ದಾರೆ.

ಭಾರತದ ಬ್ಯಾಟ್ಸ್‌ಮನ್‌ಗಳಾದ ಚೇತೇಶ್ವರ ಪೂಜಾರ ಹಾಗೂ ವಿರಾಟ್ ಕೊಹ್ಲಿ ಕ್ರಮವಾಗಿ ನಾಲ್ಕು ಮತ್ತು ಆರನೇ ಸ್ಥಾನದಲ್ಲಿ ಮುಂದುವರಿದ್ದಾರೆ. ಇತ್ತೀಚೆಗೆ ಭಾರತ ತಂಡ ಯಾವುದೇ ಟೆಸ್ಟ್ ಪಂದ್ಯಗಳನ್ನು ಆಡಿಲ್ಲ. ಲೋಕೇಶ್ ರಾಹುಲ್‌, ಅಜಿಂಕ್ಯ ರಹಾನೆ ಒಂದು ಸ್ಥಾನಗಳಲ್ಲಿ ಏರಿಕೆ ಕಂಡು ಕ್ರಮವಾಗಿ ಎಂಟು ಮತ್ತು ಒಂಬತ್ತನೇ ಸ್ಥಾನದಲ್ಲಿ ಇದ್ದಾರೆ.

Leave a Reply